ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ನಾಯಕ ಅಜಿತ್ ಪವಾರ್ ಅವರು ಖಾಸಗಿ ಚಾಟರ್ಡ್ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈಯಿಂದ ಬಾರಾಮತಿಗೆ ತೆರಳುತ್ತಿದ್ದ ವಿಮಾನವು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿದೆ.
ಈ ದುರ್ಘಟನೆಯಲ್ಲಿ ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಧಾವಿಸಿ ಕಾರ್ಯಾಚರಣೆ ನಡೆಸಿವೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಿಂದ ದುಃಖಿತನಾಗಿದ್ದೇನೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನಾನಿದ್ದೇನೆ. ಈ ತೀವ್ರ ದುಃಖದ ಕ್ಷಣದಲ್ಲಿ ಮೃತರ ಕುಟುಂಬಗಳಿಗೆ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
1959ರಲ್ಲಿ ಅಹಮದಾಬಾದ್ ಜಿಲ್ಲೆಯಲ್ಲಿ ಜನಿಸಿದ ಅಜಿತ್ ಪವಾರ್ ತಮ್ಮ ಚಿಕ್ಕಪ್ಪನ ನ್ಯಾಷನಲ್ ಕಾನ್ಫಿರೆನ್ಸ್ ಪಕ್ಷದಲ್ಲಿ ಪಳಗಿದ ರಾಜಕಾರಣಿಯಾಗಿ ರೂಪಗೊಂಡರೂ, 1991 ರಲ್ಲಿ ಪ್ರಥಮ ಬಾರಿ ಬಾನಾಮತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಹೊಂದಿ ರಾಜಕೀಯ ಜೀವನ ಪ್ರಾರಂಭಿಸಿದರು. ಎಂಟು ಬಾರಿ ಶಾಸನ ಸಭೆಗೆ ಆಯ್ಕೆಯಾಗಿದ್ದ ಪವಾರ್ ಮನೆತನದ ಈ ಕುಡಿ ನಾಲ್ಕು ಮುಖ್ಯಮಂತ್ರಿಗಳ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಹತ್ತು ವರ್ಷಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದರು. ಮಹರಾಷ್ಟ್ರ ರಾಜಕೀಯದ ಏಳು-ಬೀಳುಗಳು ಮತ್ತು ತಳ-ಮಳಗಳ ನಡುವೆ ತಮ್ಮದೇ ರಾಜಕೀಯ ಚಾಪನ್ನು ಮೂಡಿಸಿದ ನಾಯಕರಲ್ಲಿ ಪ್ರಸಿದ್ಧರಾಗಿದ್ದು ಪಶ್ಚಿಮ ಮಹಾರಾಷ್ಟ್ರದ ರಾಜಕಾರಣಕ್ಕೆ ಇವರ ನಿಧನದಿಂದ ಇಂದು ನಿರ್ವಾತ ಸೃಷ್ಟಿಯಾಗಿರುತ್ತದೆ.
