2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯ. 2026ರ ಐಸಿಸಿ ಮಹಿಳಾ ಟಿ೨೦ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ಜೂನ್ ೧೨ರಿಂದ ಜುಲೈ 5ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ನಲ್ಲಿ ನಡೆಯಲಿದ್ದು, ಮಹಿಳಾ ಕ್ರಿಕೆಟ್ ಇತಿಹಾಸದ ಮತ್ತೊಂದು ಮಹತ್ವದ ಅಧ್ಯಾಯಕ್ಕೆ ವೇದಿಕೆಯಾಗಲಿದೆ. ಇದು ಐಸಿಸಿ ಮಹಿಳಾ ಟಿ20 ವಿಶ್ವಕಪ್ನ 10ನೇ ಆವೃತ್ತಿಯಾಗಿದ್ದು, ವಿಶ್ವದ ಅತ್ಯುತ್ತಮ ಮಹಿಳಾ ಕ್ರಿಕೆಟ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.
ಈ ಬಾರಿಯ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಭಾಗವಹಿಸಲಿದ್ದು, 33 ಪಂದ್ಯಗಳು ಇಂಗ್ಲೆಂಡ್ನ ಏಳು ಪ್ರಮುಖ ಕ್ರೀಡಾಂಗಣಗಳಲ್ಲಿ ನಡೆಯಲಿವೆ. ಗುಂಪು ಹಂತದ ಪಂದ್ಯಗಳಿಂದ ಆರಂಭವಾಗುವ ಟೂರ್ನಿಯು ಸೆಮಿಫೈನಲ್ ಹಾಗೂ ಫೈನಲ್ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಲಿದೆ. ಮಹಿಳಾ ಟಿ೨೦ ವಿಶ್ವಕಪ್ನ ಮೊದಲ ಆವೃತ್ತಿಗೆ 2009ರಲ್ಲಿ ಇಂಗ್ಲೆಂಡ್ ಆತಿಥ್ಯ ವಹಿಸಿತ್ತು. ಇದೀಗ ಸುಮಾರು ೧೭ ವರ್ಷಗಳ ಬಳಿಕ ಮತ್ತೊಮ್ಮೆ ಈ ಪ್ರತಿಷ್ಠಿತ ಟೂರ್ನಿಯನ್ನು ಆಯೋಜಿಸುವ ಅವಕಾಶ ಇಂಗ್ಲೆಂಡ್ ಮತ್ತು ವೇಲ್ಸ್ಗೆ ದೊರೆತಿದೆ. ಈ ಮೂಲಕ ಮಹಿಳಾ ಕ್ರಿಕೆಟ್ಗೆ ಮತ್ತಷ್ಟು ಉತ್ತೇಜನ ನೀಡುವ ನಿರೀಕ್ಷೆ ವ್ಯಕ್ತವಾಗಿದೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ಸೇರಿದಂತೆ ವಿಶ್ವದ ಬಲಿಷ್ಠ ತಂಡಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಭಾರತ ಮಹಿಳಾ ತಂಡವೂ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದು, ಅಭಿಮಾನಿಗಳಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಕ್ರಿಕೆಟ್ ವಿಶ್ವದಾದ್ಯಂತ ವೇಗವಾಗಿ ಬೆಳೆಯುತ್ತಿದ್ದು, ಪ್ರೇಕ್ಷಕರ ಸಂಖ್ಯೆ, ಪ್ರಸಾರ ಹಕ್ಕುಗಳು ಹಾಗೂ ವಾಣಿಜ್ಯ ಮೌಲ್ಯದಲ್ಲೂ ಗಣನೀಯ ಏರಿಕೆ ಕಂಡುಬಂದಿದೆ. 2026ರ ಮಹಿಳಾ ಟಿ೨೦ ವಿಶ್ವಕಪ್ ಈ ಬೆಳವಣಿಗೆಗೆ ಮತ್ತಷ್ಟು ಬಲ ತುಂಬುವ ಟೂರ್ನಿಯಾಗಿ ಪರಿಗಣಿಸಲಾಗಿದೆ. ಕ್ರಿಕೆಟ್ ಅಭಿಮಾನಿಗಳಿಗೆ ಸುಮಾರು ಮೂರು ವಾರಗಳ ಕಾಲ ರೋಚಕ ಪಂದ್ಯಗಳ ರಸದೌತಣ ನೀಡಲಿರುವ ಈ ವಿಶ್ವಕಪ್ ಮಹಿಳಾ ಕ್ರಿಕೆಟ್ನ ಹೊಸ ಪ್ರತಿಭೆಗಳನ್ನು ಜಗತ್ತಿಗೆ ಪರಿಚಯಿಸುವ ವೇದಿಕೆಯಾಗುವುದರ ಜೊತೆಗೆ, ಕ್ರೀಡೆಯ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸುವ ನಿರೀಕ್ಷೆಯಿದೆ.
ಈ ಮಧ್ಯ ಇಲ್ಲಿಯವರೆಗೂ ನಡೆದ ಪಂದ್ಯಗಳಲ್ಲಿ ಗೆಲುವಿನ ಪ್ರದರ್ಶನ ತೋರಿದ ಭಾರತ ತಂಡವು ಸೆಮಿಫೈನಲ್ ಕನಸಿನತ್ತ ಭಾರತ ಮಹಿಳಾ ತಂಡ-ಬ್ಯಾಟಿಂಗ್, ಬೌಲಿಂಗ್ನಲ್ಲಿ ಮಿಂಚಿದ ‘ವುಮನ್ ಇನ್ ಬ್ಲೂ’ ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ೨೦೨೬ರ ಐಸಿಸಿ ಮಹಿಳಾ ಟಿ೨೦ ವಿಶ್ವಕಪ್ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಗಮನಾರ್ಹ ಪ್ರದರ್ಶನ ನೀಡುತ್ತಿದೆ. ನಾಯಕಿ ಹರ್ಮನ್ಪ್ರೀತ್ ಕೌರ್ ಅವರ ನೇತೃತ್ವದ ತಂಡವು ಗುಂಪು ಹಂತದಲ್ಲಿ ಸ್ಥಿರ ಪ್ರದರ್ಶನ ನೀಡಿ ಸೆಮಿಫೈನಲ್ ಪ್ರವೇಶದ ಬಾಗಿಲಿನಲ್ಲಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಶುಭಾರಂಭ ಮಾಡಿತು. ನಂತರ ನೆದರ್ಲೆಂಡ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಉತ್ತಮ ಹೋರಾಟ ನೀಡಿದರೂ ೬ ವಿಕೆಟ್ಗಳಿಂದ ಸೋಲನುಭವಿಸಿತು. ಆದರೆ ಬಾಂಗ್ಲಾದೇಶ ವಿರುದ್ಧ ೫ ವಿಕೆಟ್ಗಳ ಜಯ ದಾಖಲಿಸಿ ಸೆಮಿಫೈನಲ್ ರೇಸ್ನಲ್ಲಿ ಮತ್ತೆ ಬಲಿಷ್ಠ ಸ್ಥಾನಕ್ಕೇರಿದೆ. ಭಾರತದ ಯಶಸ್ಸಿನಲ್ಲಿ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅವರ ಆಕ್ರಮಣಕಾರಿ ಬ್ಯಾಟಿಂಗ್ ಪ್ರಮುಖ ಪಾತ್ರ ವಹಿಸಿದೆ. ಬಾಂಗ್ಲಾದೇಶ ವಿರುದ್ಧದ ಅರ್ಧಶತಕದ ಮೂಲಕ ತಂಡಕ್ಕೆ ಭದ್ರ ಅಡಿಪಾಯ ಹಾಕಿದ ಅವರು, ವಿಶ್ವಕಪ್ನಲ್ಲಿ ಭಾರತದ ಪ್ರಮುಖ ಬ್ಯಾಟರ್ಗಳಲ್ಲಿ ಶೃತಿ ಮಂದಣ್ಣ ಜೊತೆಗೆ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಮಧ್ಯಮ ಕ್ರಮದಲ್ಲಿ ಹರ್ಮನ್ಪ್ರೀತ್ ಕೌರ್, ಜೆಮಿಮಾ ರೋಡ್ರಿಗ್ಸ್ ಹಾಗೂ ರಿಚಾ ಘೋಷ್ ಅಗತ್ಯ ಸಂದರ್ಭಗಳಲ್ಲಿ ತಂಡಕ್ಕೆ ಆಸರೆಯಾಗಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಭಾರತ ಉತ್ತಮ ಪ್ರದರ್ಶನ ನೀಡಿದೆ. ಯುವ ಸ್ಪಿನ್ನರ್ ಶ್ರೀ ಚರಣಿ ಈ ಆವೃತ್ತಿಯಲ್ಲಿ ಭಾರತದ ಪರ ಒಂದೇ ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ರಾಧಾ ಯಾದವ್, ದೀಪ್ತಿ ಶರ್ಮಾ ಹಾಗೂ ವೇಗದ ಬೌಲರ್ಗಳೂ ಎದುರಾಳಿ ಬ್ಯಾಟರ್ಗಳಿಗೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ಭಾರತದ ಮುಂದಿರುವ ದೊಡ್ಡ ಸವಾಲು ಆಸ್ಟ್ರೇಲಿಯಾ ವಿರುದ್ಧದ ಪಂದ್ಯ. ಈ ಪಂದ್ಯದಲ್ಲಿ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತವಾಗಲಿದೆ. ಸೋತರೆ ಇತರೆ ಪಂದ್ಯಗಳ ಫಲಿತಾಂಶ ಹಾಗೂ ನೆಟ್ ರನ್ರೇಟ್ ಮೇಲೆ ಭವಿಷ್ಯ ನಿರ್ಧಾರವಾಗಲಿದೆ. ಒಟ್ಟಾರೆ, 2026ರ ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ಮಹಿಳಾ ತಂಡ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ನಲ್ಲಿ ಸಮತೋಲನದ ಪ್ರದರ್ಶನ ನೀಡಿ ಪ್ರಶಸ್ತಿ ಗೆಲ್ಲುವ ಪ್ರಮುಖ ತಂಡಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಭಾರತದ ಅಭಿಮಾನಿಗಳು ಇದೀಗ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಪಂದ್ಯವನ್ನು ಕಾತರದಿಂದ ಎದುರು ನೋಡುತ್ತಿದ್ದಾರೆ.
