ಬೆಂಗಳೂರು: 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಗೆ ರಾಜ್ಯಪಾಲ ತಾವರ್ ಚಂದ್ ಗೇಹ್ಲೋಟ್ ಭಾನುವಾರ ಚಾಲನೆ ನೀಡಿದರು.
ಭಾರತದ ಚುನಾವಣಾ ಆಯೋಗ 2011ರಿಂದ ಪ್ರತಿ ವರ್ಷ ಜನವರಿ ೨೫ರಂದು ದೇಶಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಭಾನುವಾರ ನಗರದ ಟೌನ್ ಹಾಲ್ನಲ್ಲಿ ಭಾರತದ ಚುನಾವಣಾ ಆಯೋಗ ೧೬ನೇ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಚುನಾವಣಾ ನಿರ್ವಹಣಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳು, ವಿದ್ಯಾರ್ಥಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇನ್ನೂ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬು ಕುಮಾರ ೨೦೨೬ರ ರಾಷ್ಟ್ರೀಯ ಮತದಾರರ ದಿನದ ಘೋಷವಾಕ್ಯ ನನ್ನ ಭಾರತ, ನನ್ನ ಮತ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರಿಕ ಎಂಬ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಇದೇ ಸಂದರ್ಭದಲ್ಲಿ ದೇಶದ ಮತದಾರ ರಿಗೆ ಸಮರ್ಪಿತವಾಗಿರುವ ರಾಷ್ಟ್ರೀಯ ಮತ ದಾರರ ದಿನವನ್ನು ಆಚರಿಸುವುದರ ಮೂಲಕ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಲು ಪ್ರೋತ್ಸಾಹಿಸಿ. ಹೊಸ ಮತದಾರರನ್ನು ಅಭಿನಂದಿಸಿ ಮತದಾರರ ಗುರುತಿನ ಚೀಟಿ ಗಳನ್ನು ವಿತರಿಸಿದರು.
ಯುವಕರು, ವಿಶೇಷಚೇತನರು, ಮಹಿಳೆ ಯರು, ತೃತೀಯ ಲಿಂಗಿಗಳು ಹಾಗೂ ವಿಶೇಷ ವಾಗಿ ನೈಜವಾಗಿ ದುರ್ಬಲ ಬುಡಕಟ್ಟು ಜನಾಂಗದ ಮತದಾರರಿಗೆ ಮತದಾರರ ಗುರುತಿನ ಚೀಟಿಗಳನ್ನು ಸಾಂಕೇತಿಕವಾಗಿ ವಿತರಿಸಿ.
2025ನೇ ಸಾಲಿನಲ್ಲಿ ವಿವಿಧ ಚುನಾವಣಾ ಸಂಬಂಧಿತ ಪ್ರಕ್ರಿಯೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಹಾಗೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ವ ತಯಾರಿಯಲ್ಲಿ ಉತ್ತಮ ಸಾಧನೆ ಮಾಡಿದ ೫ ಜಿಲ್ಲಾ ಚುನಾವಣಾಧಿಕಾರಿಗಳು, 5 ಅಪರ ಜಿಲ್ಲಾ ಚುನಾವಣಾಧಿಕಾರಿಗಳು, 5 ಮತದಾರರ ನೋಂದಣಾಧಿಕಾರಿಗಳು, 5 ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಕರ್ನಾಟಕದ ೧ ರಿಸರ್ಚ್ ಅಸಿಸ್ಟೆಂಟ್, 10 ಬೂತ್ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರು, 34 ಬೂತ್ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ 9 ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
